Tuesday, November 12, 2024

ಈಶ ನಿನ್ನ ಚರಣ ಭಜನೆ ಆಶೆಯಿಂದ

ಈಶ ನಿನ್ನ ಚರಣ ಭಜನೆ 








ಈಶ ನಿನ್ನ ಚರಣ ಭಜನೆ ಆಶೆಯಿಂದ ಮಾಡುವೆನುದೋಷ ರಾಶಿ ನಾಶ ಮಾಡು ಶ್ರೀಶ ಕೇಶವ

ಶರಣು ಹೊಕ್ಕೆನಯ್ಯ ಎನ್ನ ಮರಣ ಸಮಯದಲ್ಲಿ ನಿನ್ನಚರಣ ಸ್ಮರಣೆ ಕರುಣಿಸಯ್ಯ ನಾರಾಯಣ||1||

ಶೋಧಿಸೆನ್ನ ಭವದ ಕಲುಷ ಬೋಧಿಸಯ್ಯ ಜ್ಞಾನವೆನಗೆಬಾಧಿಸುವಾ ಯಮನ ಬಾಧೆ ಬಿಡಿಸು ಮಾಧವ|| 2||

ಹಿಂದನೇಕ ಯೋನಿಗಳಲಿ ಬಂದು ಬಂದು ನೊಂದೆ ನಾನುಇಂದು ಭವದ ಬಂಧ ಬಿಡಿಸು ತಂದೆ ಗೋವಿಂದನೆ ||3||

ಭ್ರಷ್ಟನೆನಿಸ ಬೇಡ ಕೃಷ್ಣ ಇಷ್ಟು ಮಾತ್ರ ಬೇಡಿಕೊಂಬೆಶಿಷ್ಟರೊಳಗೆ ಇಟ್ಟು ಕಷ್ಟ ಬಿಡಿಸು ವಿಷ್ಣುವೆ ||4||

ಮೊದಲು ನಿನ್ನ ಪಾದ ಪೂಜೆ ಮುದದಿ ಗೈವೆನಯ್ಯ ನಾನುಹೃದಯದೊಳಗೆ ಒದಗಿಸಯ್ಯ ಮಧುಸೂದನ ||5||

ಕವಿದುಕೊಂಡು ಇರುವ ಪಾಪ ಸವೆದು ಹೋಗುವಂತೆ ಜವನ ಬಾಧೆಯನ್ನು ಬಿಡಿಸೊ ಘನ ತ್ರಿವಿಕ್ರಮ ||6||

ಕಾಮಜನಕ ನಿನ್ನ ನಾಮ ಪ್ರೇಮದಿಂದ ಪಾಡುವಂಥನೇಮವೆನಗೆ ಪಾಲಿಸಯ್ಯ ಸ್ವಾಮಿ ವಾಮನ ||7||

ಮದನನಯ್ಯ ನಿನ್ನ ಮಹಿಮೆ ವದನದಲ್ಲಿ ಇರುವ ಹಾಗೆಹೃದಯದಲ್ಲಿ ಸದನ ಮಾಡು ಮುದದಿ ಶ್ರೀಧರ ||8||

ಹುಸಿಯನಾಡಿ ಹೊಟ್ಟೆ ಹೊರೆವ ವಿಷಯದಲ್ಲಿ ರಸಿಕನೆಂದುಹುಸಿಗೆ ನನ್ನ ಹಾಕದಿರೋ ಹೃಷಿಕೇಶನೆ ||9||

ಅಬ್ಧಿಯೊಳಗೆ ಬಿದ್ದು ನಾನು ಒದ್ದುಕೊಂಬೆನಯ್ಯ ಭವದಿಗೆದ್ದು ಪೋಪ ಬುದ್ಧಿ ತೋರೊ ಪದ್ಮನಾಭನೆ||10||

ಕಾಮಕ್ರೋಧ ಬಿಡಿಸಿ ನಿನ್ನ ನಾಮ ಜಿಹ್ವೆಯೊಳಗೆ ನುಡಿಸುಶ್ರೀಮಹಾನುಭಾವನಾದ ದಾಮೋದರ ||11||

ಪಂಕಜಾಕ್ಷ ನೀನು ಎನ್ನ ಮಂಕುಬುದ್ಧಿ ಬಿಡಿಸಿ ನಿನ್ನಕಿಂಕರನ್ನ ಮಾಡಿಕೊಳ್ಳೊ ಸಂಕರುಷಣ||12||

ಏಸು ಜನ್ಮ ಬಂದರೇನು ದಾಸನಲ್ಲವೇನೊ ನಿನ್ನಘಾಸಿ ಮಾಡದಿರೋ ಎನ್ನ ವಾಸುದೇವನೆ ||13||

ಬುದ್ಧಿ ಶೂನ್ಯನಾಗಿ ನಾನು ಕದ್ದ ಕಳ್ಳನಾದೆನಯ್ಯತಿದ್ದಿ ಹೃದಯ ಶುದ್ಧಿ ಮಾಡೊ ಪ್ರದ್ಯುಮ್ನನೆ ||14||

ಜನನಿ ಜನಕ ನೀನೆ ಎಂದು ಎನುವೆನಯ್ಯ ದೀನಬಂಧುಎನಗೆ ಮುಕ್ತಿ ಪಾಲಿಸಿಂದು ಅನಿರುದ್ಧನೆ ||15||

ಹರುಷದಿಂದ ನಿನ್ನ ನಾಮ ಸ್ಮರಿಸುವಂತೆ ಮಾಡು ನೇಮಇರಿಸು ನಿನ್ನ ಚರಣದಲ್ಲಿ  ಪುರುಷೋತ್ತಮ ||16||

ಸಾಧು ಸಂಗ ಕೊಟ್ಟು ನಿನ್ನ ಪಾದಭಜಕನೆನಿಸು ಎನ್ನಭೇದ ಮಾಡಿ ನೋಡದಿರೋ ಅಧೋಕ್ಷಜ ||17||

ಚಾರುಚರಣ ತೋರಿ ಎನಗೆ ಪಾರುಗಾಣಿಸಯ್ಯ ಕೊನೆಗೆಭಾರ ಹಾಕಿ ಇರುವೆ ನಿನಗೆ ನಾರಸಿಂಹನೆ ||18||

ಸಂಚಿತಾರ್ಥ ಪಾಪಗಳನು ಕಿಂಚಿತಾದರುಳಿಯದಂತೆ ಮುಂಚಿತಾಗಿ ಕಳೆದು ಪೊರೆಯೊ ಸ್ವಾಮಿ ಅಚ್ಯುತ||19||

ಜ್ಞಾನ ಭಕ್ತಿ ಕೊಟ್ಟು ನಿನ್ನ ಧ್ಯಾನದಲ್ಲಿ ಇಟ್ಟು ಎನ್ನಹೀನ ಬುದ್ಧಿ ಬಿಡಿಸೊ ಮುನ್ನ ಜನಾರ್ದನ ||20||

ಜಪತಪಾನುಷ್ಠಾನ ನೀನು ಒಪ್ಪುವಂತೆ ಮಾಡಲಿಲ್ಲತಪ್ಪ ಕೋಟಿ ಕ್ಷಮಿಸಬೇಕು ಉಪೇಂದ್ರನೆ ||21||

ಮೊರೆಯನಿಡುವೆನಯ್ಯ ನಿನಗೆ ಸೆರೆಯ ಬಿಡಿಸು ಭವದ ಎನಗೆಇರಿಸು ಭಕ್ತರೊಳಗೆ ಪರಮಪುರುಷ ಶ್ರೀಹರೇ||22||

ಪುಟ್ಟಿಸಲೇ ಬೇಡವಿನ್ನು ಪುಟ್ಟಿಸಿದಕೆ ಪಾಲಿಸಿನ್ನುಇಷ್ಟು ಬೇಡಿಕೊಂಬೆ ನಾನು ಶ್ರೀಕೃಷ್ಣನೆ||23||


No comments:

Post a Comment

He Shivanandana | ಹೇ ಶಿವನಂದನ ಹೇ ಶಿವನಂದನ

📜 Original Kannada Lyrics: ಹೇ ಶಿವನಂದನ ಹೇ ಶಿವನಂದನ ಹೇ ಗಿರಿಜಾಸುತೆ ಹೇ ಗಿರಿಜಾಸುತೆ ವಿಘ್ನವಿನಾಶಕ ಪಾಲಯಮಾಂ ಪಾರ್ವತೀಚ ನಂದನ ಮೋರಯಾ ಗಜಾನನ ಗಜವದನ ವಿಘ್ನವಿನಾಶ...